ರಾತ್ರಿ ಬೆಳಗಾಗುವುದರೊಳಗೆ ‘ಮಹಾ’ ರಾಜಕೀಯದಲ್ಲಿ ಮಿಂಚಿನ ಬೆಳವಣಿಗೆ ➤ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ನ.23. ಸರಕಾರ ರಚಿಸುವ ದೃಷ್ಟಿಯಿಂದ ಶಿವಸೇನೆಗೆ ಬೆಂಬಲ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನ ಮಿತ್ರಪಕ್ಷ ಎನ್ ಸಿಪಿಯು ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿ ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ.


ಇದರೊಂದಿಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮತ್ತು ಎನ್ ಸಿಪಿಯ ಅಜಿತ್ ಪವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶುಕ್ರವಾರ ರಾತ್ರಿಯ ವರೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಹಾಗೂ ಎನ್ ಸಿಪಿಯಿಂದ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಗೆ ಸ್ಪೀಕರ್ ಹುದ್ದೆ ನೀಡುವುದಾಗಿ ಮಾತುಕತೆ ನಡೆದಿತ್ತು. ಆದರೆ ರಾತ್ರಿ ಬೆಳಗಾಗುವುದರೊಳಗೆ ನಡೆದ ಮಿಂಚಿನ ಬೆಳವಣಿಗೆಯಲ್ಲಿ ಬಿಜೆಪಿ ಜತೆ ಕಯು ಜೋಡಿಸಿದ ಎನ್ ಸಿಪಿ ಬಿಜೆಪಿಗೆ ಬೆಂಬಲ ನೀಡಿದೆ.

Also Read  ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು

error: Content is protected !!
Scroll to Top