ಪರಿಶಿಷ್ಟ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು ನ. 23. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/- ರೂ.ಗಳ ಶಿಷ್ಯವೇತನ ನೀಡಲಾಗುವುದು. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲಿಷ್  ಭಾಷೆಯಲ್ಲಿ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಫ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಅರ್ಹರು ತಮ್ಮ ಸ್ವ-ವಿವರ, ಮತ್ತು 3-ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು 3 ಪ್ರತಿಗಳೊಂದಿಗೆ, ಡಿಸೆಂಬರ್ 10 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎರಡನೇ ಮಹಡಿ, ಪಿ.ಡಬ್ಲ್ಯೂಡಿ ಕಟ್ಟಡ, ಮಂಗಳೂರು-575001 ಇಲ್ಲಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0824-2424254 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group