(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ಕಾರ್ತಿಕ ಬಹುಳ ದ್ವಾದಶಿಯಾದ ಆದಿತ್ಯವಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು. ಎಲ್ಲಾ ಕ್ಷೇತ್ರಗಳಲ್ಲಿ ಕೊಡಿ ಏರುವುದರ ಮೂಲಕ ಜಾತ್ರೆ ಆರಂಭವಾದರೆ, ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಪ್ರಾರಂಭಗೊಂಡಿದೆ.
ಮುಂಜಾನೆ 8.33ರ ಧನುರ್ ಲಗ್ನ ಸುಮೂಹುರ್ತದಲ್ಲಿ ಕೊಪ್ಪರಿಗೆಗಳನ್ನು ಏರಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈಧಿಕ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯ ನಿರ್ವಹಣಾಧಿಕಾರಿ ಅನಂತ ಶಂಕರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯ, ಕಛೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶ್ರೀ ದೇವಳದ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.