ಪಂಜ: ಆಟೋರಿಕ್ಷಾ ಮತ್ತು ಬೈಕಿಗೆ ಢಿಕ್ಕಿ ಹೊಡೆದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪಂಜ, ನ.25. ಕಾರೊಂದು ಆಟೋರಿಕ್ಷಾ ಮತ್ತು ಬೈಕಿಗೆ ಸರಣಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಪುತ್ತೂರು ಮಾರ್ಗದ ಪಂಜ ಸಮೀಪದ ಕುಳಾಯಿತ್ತೋಡಿ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ.

ಪಂಜದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರೊಂದು ಕುಳಾಯಿತ್ತೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಆ ಬಳಿಕ ಬೈಕಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ರಿಕ್ಷಾವು ಮಗುಚಿ ಬಿದ್ದಿದ್ದು, ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡಿದ್ದಾರೆ. ಬೈಕ್ ಕಾರಿನಲ್ಲಿ ಸಿಲುಕಿಕೊಂಡಿದ್ದು, ಸವಾರ ಎಣ್ಮೂರು ನಿವಾಸಿ ಮಹಮ್ಮದ್ ಎಂಬವರ ಪುತ್ರ ರಫೀಕ್ ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

error: Content is protected !!
Scroll to Top