ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ನ.25.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ನೇತೃತ್ವದಲ್ಲಿ ಮೌಲಾನ ಅಬ್ದುಲ್ ಕಲಾಂರವರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು.

ಈ ಪ್ರಯುಕ್ತ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಣದ ಮಹತ್ವ ಮತ್ತು ಮೌಲಾನ ಅಬ್ದುಲ್ ಕಲಾಂರವರ ಶಿಕ್ಷಣ ಪ್ರೇಮ, ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಮಂತ್ರಿಯಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಮತ್ತು ಒಬ್ಬ ಸ್ವಾತಂತ್ರ್ಯ ಹೋರಾಟಗಾರನಾಗಿ ಹಾಗೂ ಶಿಕ್ಷಣ ತಜ್ಞನಾಗಿ ಮಾಡಿದ ಸಾಧನೆಗಳ ಬಗ್ಗೆ ಕಾಲೇಜಿನ ಉಪನ್ಯಾಸಕಿ ಕುಮಾರಿ ತೃಪ್ತಿ ಎಂ ಶೆಟ್ಟಿಯವರು ಸವಿವರವಾಗಿ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕರಾದ ವಂ/ಫಾ/ಡಾ/ ಎಲ್ದೋ ಪುತ್ತನ್ ಕಂಡತ್ತಿಲ್, ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್. ಹಾಗೂ ಉಪನ್ಯಾಸಕ ವೃಂದದವರು ಹಾಜರಿದ್ದರು.

Also Read  ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ - ನಾಲ್ವರು ಸಿಸಿಬಿ ವಶಕ್ಕೆ

error: Content is protected !!
Scroll to Top