ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅಪಘಾತ ➤ ಮಾಣಿ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.25. ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಮಾಣಿ ನಿವಾಸಿ ಓರ್ವರು ಮೃತಪಟ್ಟು, ಸುಮಾರು 25 ಮಂದಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣದ ಹಿರೇಸಾವೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಅಭಿಷೇಕ್ (29) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಿರೆಸಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರೆಸಾವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top