ಕಾರಿಗೆ ಢಿಕ್ಕಿ ಹೊಡೆದ ಬಿಎಂಟಿಸಿ ಬಸ್ ► ಅಪಾಯದಿಂದ ಪಾರಾದ ಕಾರು ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಚಲಿಸುತ್ತಿದ್ದ ಕಾರ್ಗೆ ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದುದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಜಂಕ್ಷನ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೈಸೂರು ರಸ್ತೆ ಕಡೆಗೆ ತೆರಳುತಿದ್ದ ಕಾರಿಗೆ ಬಿಎಂಟಿಸಿ ಬಸ್ ನಾಯಂಡನಹಳ್ಳಿ ಜಂಕ್ಷನ್ ಬಳಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಕಾರ್ ಚಾಲಕ ಕೀರ್ತಿ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top