(ನ್ಯೂಸ್ ಕಡಬ) newskadaba.com, ಮಂಗಳೂರು, ನ.26. ಮಂಗಳೂರು ಬಿಎಆರ್ ಅಸೋಸಿಯೇಷನ್(ರಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಜಂಟಿ ಆಶ್ರಯದಲ್ಲಿ ಕಾನೂನು ದಿನ-2019 ಆಚರಣೆ ಕಾರ್ಯಕ್ರಮವು ಇಂದು ಸಂಜೆ 5.30 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣ, ಕೊಡಿಯಾಲ್ ಬೈಲ್ ನಲ್ಲಿ ನಡೆಯಲಿದೆ.
ನಿವೃತ್ತ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ದ.ಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮತ್ತು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಡ್ಲೂರ್ ಸತ್ಯನಾರಾಯಣ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.