ಕಡಬ: ವಿಷ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.27. ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ಮಂಗಳವಾರದಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಶ್ರೀಧರ ಗೌಡ ಎಂಬವರ ಪುತ್ರಿ ಕು| ಸವಿತ ಎಂದು ಗುರುತಿಸಲಾಗಿದೆ. ಮಂಗಳವಾರದಂದು ವಿಷ ಸೇವಿಸಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Scroll to Top