ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಸುಳ್ಯ. ನ.27. ಅರಂತೋಡಿನಲ್ಲಿ ರಾಷ್ಟೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ
ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24 ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರಿಮತಿ ಲಿಲಾವತಿ ಕೊಡಂಕೇರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಜತ್ತಪ್ಪ ಮಾಸ್ಟರ್ ಅಳಕೆ, ಎ.ವಿ ತೀರ್ಥರಾಮ ಮಾಸ್ಟರ್, ಕಿಶೋರ್ ಕುಮಾರ್ ಉಳುವಾರು, ಮಜೀದ್, ಅಶ್ರಫ್ ಗುಂಡಿ ಸೇರಿದಂತೆ ದುರ್ಗಾ ಮಾತಾ ಭಜನಾ ಮಂದಿರದ ಸದಸ್ಯರು, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್, ಯುವ ಬ್ರಿಗೇಡ್, ಸ್ವ ಸಹಾಯ ಸಂಘದ ಸದಸ್ಯರು, ವಿವಿಧ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.

Also Read  ರಾಜ್ಯದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟ ಬಿಜೆಪಿ ► ಕಡಬದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

error: Content is protected !!
Scroll to Top