ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ನ.27. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬುಧವಾರದಂದು ಕಡಬ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದುದರಿಂದ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ ದೂರಿನಂತೆ ಆರೋಪಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Scroll to Top