ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಸುಧಾ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.

Also Read  ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್

ಘಟನೆಯಿಂದ ಸುಧಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವಾಲಯಕ್ಕೆ ಪೂಜೆಗೆಂದು ಹೋದ ಸುಧಾ ಅವರು ಮೃತಪಟ್ಟಿರುವ ವಿಷಯ ಕೇಳಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಘಟನೆ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top