ಉಡುಪಿ: ಪತ್ನಿ, ಇಬ್ಬರು ಪುತ್ರರನ್ನು ಕೊಚ್ಚಿ ಬರ್ಬರ ಕೊಲೆ ➤ ಬಳಿಕ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಡುಪಿ, ನ.27. ವ್ಯಕ್ತಿಯೋರ್ವರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ವೆ ಎಂಬಲ್ಲಿ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

 

ಬೆಳ್ವೆ ಗ್ರಾಮದ ಸೂರ್ಗೊಳಿ ಸಮೀಪದ ಸೆತ್ತೋಳಿ ನಿವಾಸಿ ಸೂರ್ಯ ನಾರಾಯಣ ಭಟ್ ಅಲ್ಸೆ (52) ಎಂಬವರು ತನ್ನ ಪತ್ನಿ ಮಾನಸ(50), ಪುತ್ರರಾದ ಸುಧೀಂದ್ರ(14) ಮತ್ತು ಸುದೇಶ್ (8) ಎಂಬವರನ್ನು ಮಾರಕಾಯುಧದಿಂದ ಕೊಚ್ಚಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಮೇಲಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Also Read  ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ

error: Content is protected !!
Scroll to Top