ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡಿ.3- ವಿಶ್ವ ವಿಕಲಚೇತನರ ದಿನಾಚರಣೆ – News Kadaba

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.28.   ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ  ಮಂಗಳೂರು, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.


ಸಭಾ ಕಾರ್ಯಕ್ರಮದ ಮುಂಚಿತವಾಗಿ ಬೆಳಿಗ್ಗೆ 9 ಗಂಟೆಗೆ ವಿಶೇಷ ಶಾಲೆಗಳ ವಿಕಲಚೇತನ ಮಕ್ಕಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಂದ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು ಆವರಣದಿಂದ ಪುರಭವನ ಸಭಾಂಗಣದವರೆಗೆ ಸಾಮಾಜಿಕ ಅರಿವಿಗಾಗಿ ಪಥಸಂಚಲನ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಜರಾಯಿ  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Scroll to Top