ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ – ವಾರ್ಷಿಕೋತ್ಸವ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಮಹಾನಗರದ ಶಕ್ತಿನಗರದಲ್ಲಿರುವ ಶಕ್ತಿ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 30 ರಂದು ನಡೆಯಲಿದೆ.

ಬಿಜೆಪಿಯ ರಾಷ್ಟ್ರೀಯ ಮಹಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ವಿಕಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್, ಕ್ರೆಡಾಯಿ ಮಂಗಳೂರು ಇದರ ಅಧ್ಯಕ್ಷ ಡಿ.ಬಿ ಮೆಹ್ತಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಎಂ. ಆರ್.ಪಿ.ಎಲ್‍ನ ನಿವೃತ್ತ ಉಪಾಧ್ಯಕ್ಷ ಹಾಗೂ ಶಿಕ್ಷಣ ತಜ್ಞ ವಿ.ಕೆ ತಾಳಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ವ ಪ್ರಾಥಮಿಕ ಶಾಲೆಯ ಸಾಂಸ್ಕತಿಕ ಕಾರ್ಯಕ್ರಮಗಳು  ಅಪರಾಹ್ನ 2 ಕ್ಕೆ ಆರಂಭಗೊಳ್ಳಲಿದೆ. ಆನಂತರ 3 ಗಂಟೆಗೆ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಲಿದ್ದಾರೆ. ಸಭಾ ಕಾರ್ಯಕ್ರಮವು ಸಂಜೆ 5 ರಿಂದ 6:45 ರ ತನಕ ನಡೆಯಲಿದೆ. ಸಾಯಂಕಾಲ 6:45 ರಿಂದ 8 ರ ತನಕ ಶಕ್ತಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ

error: Content is protected !!
Scroll to Top