ನಾಳೆ (29) ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ನ.28. ಸರಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಾರ್ಷಿಕೋತ್ಸವ ಸಮಾರಂಭವು ನಾಳೆ (ನ.29) ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವು ಪೂರ್ವಾಹ್ನ 9:30 ಕ್ಕೆ ಹಾಗೂ ಅಪರಾಹ್ನ 2 ರಿಂದ  ಸಾಂಸ್ಕೃತಿಕ ಕಾರ್ಯಕ್ರಮವು ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ.

ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಪಿ ವರ್ಗೀಸ್ ರವರು ಉದ್ಘಾಟನೆಯನ್ನು ಮಾಡಲಿದ್ದು, ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಬು ಮುಗೇರ ಧ್ವಜಾರೋಹಣಗೈಯಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಧ ಎಸ್.ಅಂಗಾರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ತಾ.ಪಂ. ಸದಸ್ಯರಾದ  ಫಝಲ್ ಕೋಡಿಂಬಾಳ, ಕಾಲೇಜು ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರಾದ ಕೃಷ್ಣ ಶೆಟ್ಟಿ ಹಾಗೂ   ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಅಬ್ದುಲ್ ಖಾದರ್ ಭಾಗವಹಿಸಲಿದ್ದಾರೆ.

Also Read  ಅಬ್ಬಕ್ಕ ಉತ್ಸವ - ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ

error: Content is protected !!
Scroll to Top