ಕಡಬ: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.28. ಕೆಲಸಕ್ಕೆಂದು ತೆರಳಿದ್ದ ಕಡಬದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಈ ಬಗ್ಗೆ ಆಕೆಯ ತಾಯಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಾಪತ್ತೆಯಾದ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬೇರಿಕೆ ನಿವಾಸಿ ಮೋನಪ್ಪ ಕುಂಬಾರ ಎಂಬವರ ಪುತ್ರಿ ಕು| ಶ್ವೇತಾ ಎಂದು ಗುರುತಿಸಲಾಗಿದೆ. ಈಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನಗೆ ಕೆಲಸ‌ ಸಿಕ್ಕಿದೆಯೆಂದು ಹೇಳಿ ಕಳೆದ ಆಗಸ್ಟ್ 12 ರಂದು ಮನೆಯಿಂದ ತೆರಳಿದ್ದು, ಆ ಬಳಿಕ ತಿಂಗಳಲ್ಲಿ ಒಂದು ಸಲ ಕರೆ ಮಾಡಿದ್ದಾಳೆ ಎನ್ನಲಾಗಿದೆ. ಇದೀಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಆಕೆಯ ತಾಯಿ ಕಡಬ ಠಾಣೆಗೆ ದೂರು ನೀಡಿದ್ದಾರೆ.

Also Read  ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

error: Content is protected !!
Scroll to Top