ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಮತ್ತು ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ಚಾಲಕರನ್ನು ಗುರುತಿಸಿ ಪುರಸ್ಕಾರ ನೀಡಲು ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಡಿಸೆಂಬರ್ 20 ರ ತನಕ ವಿಸ್ತರಿಸಲಾಗಿದೆ. ನೋಂದಾಯಿತ ಯೂನಿಯನ್/ಸಂಘಗಳು ಚಾಲಕರ ವಿವರಗಳನ್ನು ದಾಖಲೆಗಳೊಂದಿಗೆ ಶಿಫಾರಸು ಮಾಡಬಹುದು.


ಹೆಚ್ಚಿನ ವಿವರಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಂಬಂದಿಸಿದ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಸಂಪರ್ಕಿಸಲು ಸದಸ್ಯ ಕಾರ್ಯದರ್ಶಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ದ.ಕ.ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಮಂಗಳೂರು, ದ.ಕ. ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Also Read  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

error: Content is protected !!
Scroll to Top