ಉದರ ದರ್ಶಕ ಶಸ್ತ್ರ ಚಿಕಿತ್ಸೆ



(ನ್ಯೂಸ್ ಕಡಬ) newskadaba.com, ಮಂಗಳೂರು, ನ.30. ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಡಿಸೆಂಬರ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳ ವಿವರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ಈ ಕೆಳಗಿನಂತೆ ತಿಳಿಸಿದೆ.







ಡಿಸೆಂಬರ್ 6 ರಂದು ಬೆಳಿಗ್ಗೆ ಸರಕಾರಿ ಆರೋಗ್ಯ ಕೇಂದ್ರ ಕಡಬ, 10 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ ಮತ್ತು ಮಧ್ಯಾಹ್ನ 12 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಹಾಗೂ ತಾಲೂಕು ಆಸ್ಪತ್ರೆ ಬಂಟ್ವಾಳ, 11 ರಂದು ಸಾರ್ವಜನಿಕ ಆಸ್ಪತ್ರೆ ಸುಳ್ಯ, 13 ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, 17 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್ ಹಾಗೂ ತಾಲೂಕು ಆಸ್ಪತ್ರೆ ಬೆಳ್ತಂಗಡಿ, 20 ರಂದು ಸರಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, 24 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ, 30 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲದಲ್ಲಿ ನಡೆಯಲಿದೆ. ಹಾಗೂ ಪ್ರತಿ ವಾರದ ಗುರುವಾರ ಶುಕ್ರವಾರದಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಉದರದರ್ಶಕ ಹಾಗೂ ಪ್ರತಿ ದಿನ (ರಜಾ ದಿನ ಹೊರತುಪಡಿಸಿ) ಟ್ಯುಬೆಕ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top