ಜೀಪ್ – ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ ➤ ಏಳು ಮಂದಿ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಡಿ.01. ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ಭಾನುವಾರದಂದು ಸಂಭವಿಸಿದೆ.







ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ರಿಕ್ಷಾ ಹಾಗೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.






error: Content is protected !!
Scroll to Top