ಕುಕ್ಕೇ ಸುಬ್ರಹ್ಮಣ್ಯ: ಬ್ರಹ್ಮ ರಥೋತ್ಸವಕ್ಕೆ ಕ್ಷಣಗಣನೆ ➤ ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಕೊಡಮಾಡಿದ ಬ್ರಹ್ಮರಥದ ಸಮರ್ಪಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.02. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಇಂದು (ಡಿಸೆಂಬರ್ 2) ಸೋಮವಾರ ಬೆಳಗ್ಗೆ 8.14ರ ಧನುರ್ಲಗ್ನದ ಶುಭ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಸಲದ ವಿಶೇಷತೆಯೆಂದರೆ ಉದ್ಯಮಿಗಳಾದ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ದಾನವಾಗಿ ನೀಡಿದ ನೂತನ ಬ್ರಹ್ಮರಥದಲ್ಲಿ ರಥೋತ್ಸವ ನಡೆಯಲಿದೆ. ಅದಕ್ಕಿಂತ ಮೊದಲು ಬ್ರಹ್ಮರಥದ ಸಮರ್ಪಣೆ ಕಾರ್ಯ ನಡೆಯಲಿದೆ. ಚಂಪಾ ಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರದಂದು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.

Also Read  ರಾಜ್ಯದಲ್ಲಿಂದು 248 ಹೊಸ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆ

error: Content is protected !!
Scroll to Top