ಗಂಡಿಬಾಗಿಲು ಮದ್ರಸದಲ್ಲಿ ಪ್ರಾರ್ಥನಾ ದಿನಾಚರಣೆ



(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.2.   ಹಿಮಾಯತುಲ್ ಇಸ್ಲಾಂ ಮದ್ರಸ ಗಂಡಿಬಾಗಿಲು ಇದರ ಆಶ್ರಯದಲ್ಲಿ ಸಮಸ್ತ ಪ್ರಾರ್ಥನಾ ದಿನಾಚರಣೆ ಕಾರ್ಯಕ್ರಮ ಭಾನುವಾರದಂದು ಜರುಗಿತು.








ಗಂಡಿಬಾಗಿಲು ಮಸೀದಿ ಖತೀಬ್ ಸೆಯ್ಯದ್ ಅನಸ್ ತಂಙಳ್ ಕಾರ್ಯಕ್ರಮ ಉದ್ಘಾಟಿಸಿ ಪ್ರಾರ್ಥನಾ ದಿನಾಚರಣೆ ಮಹತ್ವದ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು. ಸಮಾರಂಭದಲ್ಲಿ ಗಂಡಿಬಾಗಿಲು ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಉಪಾಧ್ಯಕ್ಷ ಎಸ್. ಆದಂ ಹಾಜಿ, ಮದ್ರಸದ ಮುಅಲ್ಲಿಂ ರಫೀಕ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿ ಅಬ್ದುಲ್ ರಜಾಕ್ ಮರ್ವೇಲ್, ಎಸ್.ಕೆ.ಎಸ್.ಎಸ್.ಎಫ್. ಅಧ್ಯಕ್ಷ ಎಸ್.ಪಿ. ಖಲಂದರ್, ಪದಾಧಿಕಾರಿಗಳಾದ ಅಬ್ದುಲ್ ಲತೀಫ್, ನಿಸಾರ್ ಮತ್ತಿತರರು ಉಪಸ್ಥಿತರಿದ್ದರು. ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಸ್ವಾಗತಿಸಿ, ಹಾರಿಸ್ ವಂದಿಸಿದರು.






error: Content is protected !!
Scroll to Top