ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ದ.ಕ ಜಿಲ್ಲಾಡಳಿತ ಹಾಗೂ ಲಯನ್ಸ್ ಕ್ಲಬ್ ವೆಲೆನ್ಸಿಯಾ ವತಿಯಿಂದ ಡಿಸೆಂಬರ್ 5 ರಂದು ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸಹಕಾರದೊಂದಿಗೆ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮವನ್ನು ಸಾಂಕೇತಿಕವಾಗಿ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಜಿಲ್ಲಾ ಗವರ್ನರ್ ರೊನಾಲ್ಡ್ ಗೋಮ್ಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಲಯನ್ ಲೆಸ್ಲಿ ಡಿ’ಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದೆ.

Also Read  ಪಬ್ಜಿಯಿಂದ ಪ್ರಾಣಹೋಯ್ತು ➤ 12 ವರ್ಷದ ಬಾಲಕನಿಗೆ ಹಾರ್ಟ್ ಅಟ್ಯಾಕ್... !

error: Content is protected !!
Scroll to Top