ಡಿ. 6 ರಂದು ವಿಶ್ವ ಏಡ್ಸ್ ದಿನ ಮತ್ತು ಏಡ್ಸ್ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್ ಎಸ್ ಎಸ್ ಘಟಕಗಳ ರೆಡ್‍ರಿಬ್ಬನ್ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಡಿಸೆಂಬರ್ 6 ರಂದು ಬೆಳಿಗ್ಗೆ 9 ಗಂಟೆಗೆ ಶಾಂತಿ ನಿಲಯ ಚರ್ಚ್ ಬಳಿಯ ಮೈದಾನ ಬಲ್ಮಠ, ಮಂಗಳೂರು ಇಲ್ಲಿಂದ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ ಕಂಕನಾಡಿ ಮಂಗಳೂರು ಇಲ್ಲಿಗೆ ಏಡ್ಸ್ ಜಾಗೃತಿ ಜಾಥಾ ಕಾರ್ಯಕ್ರಮ ಮತ್ತು ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Also Read  ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ - ದೂರು ದಾಖಲು

error: Content is protected !!
Scroll to Top