(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5 ಡಿಸೆಂಬರ್ 2 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸಲಾದಂತೆ, ತಾಯಿಯ ಮತ್ತು ಮಗುವಿನ ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಎಂಟಿಪಿ ಕಾಯ್ದೆಯನ್ನು ಗಮನದಲ್ಲಿರಿಸಿಕೊಂಡು ಅದರ ಪ್ರಕಾರ ಪ್ರತಿಯೊಬ್ಬ ಸಂಸ್ಥೆಯ ವೈದ್ಯರು ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡುವುದು ಜವಾಬ್ದಾರಿಯಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿರುತ್ತಾರೆ.