ಪುತ್ತೂರು: ಮಗನಿಂದಲೇ ತಂದೆಯ ಕೊಲೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಕೆಲಸಕ್ಕೆ ಹೋಗದೇ ಮನೆಯಲ್ಲಿರುತ್ತಿದ್ದುದರಿಂದ ಮಗನಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಅಪ್ಪನನ್ನು ಮಗ ಮಚ್ಚಿನಿಂದ ಕುತ್ತಿಗೆಗೆ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಬೊಳ್ಳಿಂಬಳದ ನಿವಾಸಿಯಾಗಿರುವ ಕೃಷ್ಣ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯಿದಿದ್ದು, ಮಗ ಉದಯ ನಾಯ್ಕ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top