(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6 ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಕಚೇರಿ ಮುಳಿಹಿತ್ಲು ಮಂಗಳೂರು ಇಲ್ಲಿ ನಡೆಯಲಿದೆ.
ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ಇದರ ಅಧ್ಯಕ್ಷ ಯಶ್‍ಪಾಲ್ ಎ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿದ್ಯಾರ್ಥಿ ವೇತನವನ್ನು ವಿತರಿಸಲಿದ್ದಾರೆ. ಮೀನುಗಾರಿಕೆ ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‍ಗಳ ವಿತರಣೆಯನ್ನು ಮಾಡಲಿದ್ದಾರೆ. ಮಂಗಳೂರು ಶಾಸಕ ಡಿ ವೇದವ್ಯಾಸ ಕಾಮತ್ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ ಮಾಡಲಿದ್ದಾರೆ.