ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಬಜಪೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಬಜಪೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಜಪೆ ಪೇಟೆಯಲ್ಲಿ ಆಟೋರಿಕ್ಷಾ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಆಟೋರಿಕ್ಷಾ ನಿಲ್ದಾಣ, ಬಜಪೆ ಬಸ್ ನಿಲ್ದಾಣದ ಬಳಿ ನಡೆಯಲಿದೆ.


ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಶಾಸಕ ಉಮಾನಾಥ್ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Also Read  ಭರತನಾಟ್ಯ ಜೂನಿಯರ್ ಗ್ರೇಡ್ ► ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾರ್ಥಿನಿ ಭವಿಷ್ಯಗೆ ವಿಶಿಷ್ಟ ಶ್ರೇಣಿ

error: Content is protected !!
Scroll to Top