ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ

ಲಖನೌ, ಡಿ.7: ಹೈದರಾಬಾದ್‌ನ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ರೀತಿಯಲ್ಲಿ ನನ್ನ ಮಗಳ ಮೇಲೆ ಅಟ್ಟಹಾಸ ಮೆರೆದ ಕಾಮುಕರನ್ನೂ ಎನ್‌ಕೌಂಟರ್ ಮಾಡುವಂತೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹಿಸಿದ್ದಾರೆ.

ಉತ್ತರಪ್ರದೇಶದ ಉನ್ನಾವೋದಲ್ಲಿ 5 ಮಂದಿ ಕಾಮುಕರು 20 ವರ್ಷದ ಯುವತಿ ಮೇಲೆ ಅತ್ಯಚಾರ ನಡೆಸಿದ್ದರು. ಇದರ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಬೆಂಕಿ ಹಚ್ಚಿ ಕೊಲೆಗೆತ್ನಿಸಿದ್ದರು.

ಇದರಿಂದ ಸಂತ್ರಸ್ತೆ ಶೇ.90 ಸುಟ್ಟ ಗಾಯಗೊಂಡು ಗಂಭೀರಾವಸ್ಥೆಯಲ್ಲಿ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

error: Content is protected !!
Scroll to Top