ಪುತ್ತೂರು: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಮಿಥುನ್ ಎಂಬಾತ ತನ್ನ ಬೈಕ್ ನ್ನು ಅಜಾಗರೂಕತೆಯಿಂದ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈತ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು ಶುಕ್ರವಾರ ರಾತ್ರಿ 9.45 ಗಂಟೆ ಸುಮಾರಿಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ೭೫ರ ಮುಕ್ರಾಂಪಾಡಿಯ ಕಮ್ಮಾಡಿ ಮಿಲ್ ಎಂಬಲ್ಲಿ ಪುತ್ತೂರು ಕಡೆಯಿಂದ ಕುಂಬ್ರ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ.

ಅಪಘಾತದಿಂದ ಲೋರೆನ್ಸ್ ಡಿ ಸೋಜಾ ಅವರಿಗೆ ತೀವ್ರ ಗಾಯಗಳಾಗಿದ್ದು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Scroll to Top