ಹೊಸದಿಲ್ಲಿ, ಡಿ.8: ಭಾರೀ ಅಗ್ನಿ ಅವಘಡ ಉಂಟಾಗಿ 30ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಇಲ್ಲಿ ನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದಿದೆ. 15 ಅಧಿಕ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಕಟ್ಟಡದ ಒಳಗಡೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, ನಾವು ಇದುವರೆಗೆ ಹಲವು ಮಂದಿಯನ್ನು ಕಟ್ಟಡ ಒಳಗಿನಿಂದ ಕಾಪಾಡಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿದ್ದೇವೆ. ಕೆಲವರು ಗಾಯಗೊಂಡಿದ್ದು ಇನ್ನು ಕೆಲವರು ಹೊಗೆಗೆ ಉಸಿರುಗಟ್ಟಿ ತಲೆಸುತ್ತಿ ಬಿದ್ದಿದ್ದಾರೆ. ಈ ಘಟನೆ ನಡೆಯುವಾಗ ಕಾರ್ಖಾನೆಯೊಳಗೆ 20ರಿಂದ 25 ಕಾರ್ಮಿಕರು ನಿದ್ದೆ ಮಾಡುತ್ತಿದ್ದರು ಎಂದು ಕಾರ್ಖಾನೆ ಮಾಲೀಕ ತಿಳಿಸಿದ್ದಾರೆ ಎಂದು ಚೌಧರಿ ಹೇಳಿದರು.
ಮಾಧ್ಯಮ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿದಿದ್ದು ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ಆರಿಸಲಾಗಿದೆ ಎಂದರು. ರಕ್ಷಣಾ ಕಾರ್ಯ ಮುಂದುವರಿದಿದೆ.