ಬೆಳ್ತಂಗಡಿ, ಡಿ.8: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಡಿ.8ರಂದು ಮುಖ್ಯಮಂತ್ರಿ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ವಿವಿಧ ಡಿಪೊದ 250 ಕೆಎಸ್ಸಾರ್ಟಿಸಿ ಬಸ್ಗಳನ್ನು ನಿಯೋಜಿಸಲಾಗಿದ್ದು, ಇದರಿಂದ ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಬಸ್ ಸಂಖ್ಯೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.