ಸ್ಕೂಟರ್‌ಗೆ ಬಸ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು



ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ  ರವಿವಾರ ನಡೆದಿದೆ. ಮೃತರನ್ನು  ಅಡ್ಡೂರು ನಿವಾಸಿ ಹಮೀದ್  ಎಂದು ಗುರುತಿಸಲಾಗಿದೆ.





ಅರ್ಕುಳದ ಹಾಲ್‌ವೊಂದರಲ್ಲಿ ರವಿವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ಹಮೀದ್  ವಾಪಸಾಗುತ್ತಿದ್ದ ಸಂದರ್ಭ ಈ ಅವಘಡ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನೊಂದಿಗೆ ರಸ್ತೆಗೆಸೆಯಲ್ಪಟ್ಟ ಸವಾರ ಹಮೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.






error: Content is protected !!
Scroll to Top