ಉಪಚುನಾವಣೆ: 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳ್ತಂಗಡಿ, ಡಿ.8: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಧರ್ಮಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು.

ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಿಗೆ ನಾನು ಮತ್ತು ನಮ್ಮ ಸಚಿವರು ಎರಡು ಬಾರಿ ಭೇಟಿ ನೀಡಿ ಪ್ರಚಾರ ನಡೆಸಿದ್ದೇವೆ. ಇನ್ನೂ ಮೂರುವರೆ ವರ್ಷ ಬಿಜೆಪಿ ಸ್ಥಿರ ಸರಕಾರ ನೀಡಲಿದೆ ಎಂದರು.
ಧರ್ಮಸ್ಥಳ ಕಿಂಡಿ ಅಣೆಕಟ್ಟು ಕಾಂಕ್ರಿಟ್ ಕಾಮಗಾರಿ ನಡೆಸುವ ವಿಚಾರವಾಗಿ ಡಾ.ವೀರೆಂದ್ರ ಹೆಗ್ಗಡೆ ವಿನಂತಿಯಂತೆ ಅನುದಾನ ಬಿಡುಗಡೆ ಮಾಡಿದ್ದೇನೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದರು.

Also Read  ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

ಈ ಸಂದರ್ಭ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಯಿ ಉಪಸ್ಥಿತರಿದ್ದರು.

ಧರ್ಮಸ್ಥಳ ಹೆಲಿಪ್ಯಾಡ್ ಆಗಮಿಸಿದಾಗ ಶಾಸಕ ಹರೀಶ್ ಪೂಂಜ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಕ್ಷೇತ್ರದ ಪರವಾಗಿ ಹರ್ಷೇಂದ್ರ ಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ವಾಗತಿಸಿದರು.

error: Content is protected !!
Scroll to Top