ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಮೂದಿಸಿದ ವಿವಿಧ ದಿನ ಮತ್ತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.


ಡಿಸೆಂಬರ್ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯ ವರೆಗೆ ಬಂಟ್ವಾಳ ತಾಲೂಕು ಕಚೇರಿ, ಡಿಸೆಂಬರ್ 24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯ ವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ, ಡಿಸೆಂಬರ್ 26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯ ವರೆಗೆ ಪುತ್ತೂರು ತಾಲೂಕು ಕಚೇರಿ, ಡಿಸೆಂಬರ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು.

Also Read  ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ


ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ, 0824 – 242919, 9945900778, ಪೊಲೀಸ್ ಉಪಾಧೀಕ್ಷಕರು-1 ಕಛೇರಿ, 0824 – 2453420, 8861688100, 9448530051 ಸಂಪರ್ಕಿಸಲು ಪೊಲೀಸು ಅಧೀಕ್ಷಕರರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಸೆ.17 - ವಿಶ್ವಕರ್ಮ ಜಯಂತಿ

error: Content is protected !!
Scroll to Top