ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9  ಕೆಎಸ್‍ಆರ್ ಟಿಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್‍ಗೆ ಹಾಗೂ ಹೈದರಾಬಾದ್‍ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿ ಆಕ್ಸ್‍ಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಈ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿ ಅಕ್ಸ್‍ಲ್ ಎ.ಸಿ. ಸ್ಲೀಪರ್” ವಾಹನವನ್ನು ಡಿಸೆಂಬರ್ 9 ರಿಂದ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.


ಮಂಗಳೂರು ಬಸ್ಸು ನಿಲ್ದಾಣದ ಆವರಣದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಅಧ್ಯಕ್ಷತೆಯಲ್ಲಿ ನೂತನ ಸಾರಿಗೆಗಳನ್ನು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಈ ಬಸ್ಸು ಮಂಗಳೂರು ಬಸ್ಸು ನಿಲ್ದಾಣದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಉಡುಪಿ ಮಣಿಪಾಲ, ಕುಂದಾಪುರ, ಭಟ್ಕಳ ಮಾರ್ಗವಾಗಿ ಹೈದರಾಬಾದ್‍ಗೆ ಮರುದಿನ ಬೆಳಿಗ್ಗೆ 8.30 ಗಂಟೆಗೆ ತಲುಪುತ್ತದೆ. ಮರು ಪ್ರಯಾಣದಲ್ಲಿ ಹೈದರಾಬಾದ್‍ನಿಂದ ಸಂಜೆ 7 ಗಂಟೆಗೆ ಹೊರಟು ರಾಯಚೂರು, ಕುಂದಾಪುರ, ಮಂಗಳೂರಿಗೆ ಮರುದಿನ ಬೆಳಿಗ್ಗೆ 10 ಗಂಟೆಗೆ ತಲುಪುತ್ತದೆ. ಮಂಗಳೂರಿನಿಂದ ಹೈದರಾಬಾದ್‍ಗೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ ರೂ 1,400.

ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು ಸಾರ್ವಜನಿಕರು ಸದರಿ ಸಾರಿಗೆಯ ಸದುಪಯೋಗವನ್ನು ಈ ಮೂಲಕ ಪಡೆಯಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಸಂ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group