(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್ ವಿಚಾರದಲ್ಲಿ ನ್ಯಾಯಾಲಯವು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್ ವಿಚಾರದಲ್ಲಿ ನ್ಯಾಯಾಲಯವು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಇದರೊಂದಿಗೆ ತ್ರಿವಳಿ ತಲಾಖನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದ್ದು, ತ್ರಿವಳಿ ತಲಾಖ್ ಬಗ್ಗೆ ಸಂಸತ್ತಿನಲ್ಲಿ 6 ತಿಂಗಳಲ್ಲಿ ಕಾನೂನು ರಚಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆಯಲ್ಲದೆ ಅಷ್ಟರವರೆಗೆ ತ್ರಿವಳಿ ತಲಾಖ್ ಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.