ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.10   ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಈ ರಾಜ್ಯದಲ್ಲಿ ಸುಭದ್ರ ಸರಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಸಂದೇಶ ನೀಡಿ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಅಲ್ಪ ಸಂಖ್ಯಾತ ಮೊರ್ಛದ ಅಧ್ಯಕ್ಷ ಫಯಾಝ್ ಕೆನರಾ, ತಾ.ಪಂ. ಸದಸ್ಯೆ ಪಿ.ವೈ. ಕುಸುಮಾ, ಬಿಜೆಪಿ ಪ್ರಮುಖರಾದ ಸತೀಶ್ ನಾಯಕ್, ಅಶೋಕ್ ಕುಮಾರ್ ಪಿ, ಶಿವಪ್ರಸಾದ್ ರೈ ಮೈಲೇರಿ, ಕಿಶಾನ್ ಕುಮಾರ್ ರೈ, ಆದಂ ಕುಂಡೋಳಿ, ಕೃಷ್ಣಪ್ಪ ಮಡಿವಾಳ, ಮದುಸೂದನ್ ಕೊಂಬಾರು ಹರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದರು.

Also Read  ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ

error: Content is protected !!
Scroll to Top