ಡಿ.15: ಮೀನಾಡಿ ಶಾಲೆಯಲ್ಲಿ ಪೂರ್ವಭಾವಿ ಸಭೆ

 

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.10   ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 15ರಂದು ಅಪರಾಹ್ನ ಪೂರ್ವಭಾವಿ ಸಭೆ ನಡೆಯಲಿದೆ.


1960ರಲ್ಲಿ ಪ್ರಾರಂಭಗೊಂಡ ಶಾಲೆ ಇದೀಗ 60ನೇ ವರ್ಷಾಚರಣೆ ಸಂಭ್ರಮದಲ್ಲಿದ್ದು, 60ನೇ ವರ್ಷಾರಣೆಯ ಬಗ್ಗೆ ಶಾಲಾ ಹಿರಿಯ ವಿದ್ಯಾರ್ಥಿಗಳು,, ವಿದ್ಯಾಭಿಮಾನಿಗಳು ಹಾಗೂ ಗ್ರಾಮಸ್ಥರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ತಿಳಿಸಲಾಗಿದೆ. ಇದೇ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.

Also Read  ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

error: Content is protected !!
Scroll to Top