ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯

ಹೊಸದಿಲ್ಲಿ, ಡಿ.10: ಹಾಸ್ಟೆಲ್  ಶುಲ್ಕ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.

ವಿಶ್ವವಿದ್ಯಾಲಯ ಕ್ಯಾಂಪಸ್ ನ ಬಲಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮತ್ತು ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ನಿನ್ನೆ ಮೆರವಣಿಗೆ ಹೊರಟಾಗ ಪೊಲೀಸರು ವಿದ್ಯಾರ್ಥಿಗಳನ್ನು ಬಿಕಜಿ ಕಾಮಾ ಪ್ಲೇಸ್ ಮೆಟ್ರೊ ನಿಲ್ದಾಣದಲ್ಲಿ ತಡೆದು ನಿಲ್ಲಿಸಿದರು. ಪೊಲೀಸರ ಸರ್ಪಗಾವಲು ಇದ್ದ ಪ್ರದೇಶಕ್ಕೆ ವಿದ್ಯಾರ್ಥಿಗಳು ಆಗಮಿಸಿದಾಗ ಬ್ಯಾರಿಕೇಡ್ ನಿಂದ ಆಚೆ ನೆಗೆದು ಲಾಠಿ ಚಾರ್ಜ್ ಮಾಡಲೆತ್ನಿಸಿದರು.

Also Read  ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ

ಅಲ್ಲದೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಬೇಡಿಕೆಗಳು ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಜೆಎನ್ ಯುನ ವಿದ್ಯಾರ್ಥಿಗಳು ತಿಳಿಸಿದ್ದಾರೆ.

error: Content is protected !!
Scroll to Top