(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10 ಮಂಗಳೂರು ಮಹಾನಗರಪಾಲಿಕೆಯ ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡುವ ಬಗ್ಗೆ ಸ್ವಯಂ ಘೋಷಿತ ಆಸ್ತಿ ತೆರಿಗೆ ವಸೂಲಾತಿ ಅಭಿಯಾನ-2019 ಕಾರ್ಯಕ್ರಮವನ್ನು ಡಿಸೆಂಬರ್ 11 ರಿಂದ 13 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಾಲ್ಯಪದವು ಶಾಲೆಯ ಬಳಿ ನಡೆಯಲಿದೆ.
ಅನೇಕ ತೆರಿಗೆದಾರರು ಇನ್ನೂ ತೆರಿಗೆ ಪಾವತಿಸದೇ ಇರುವುದು ಕಂಡು ಬಂದಿರುವುದರಿಂದ, ಈ ಸ್ಥಳದಲ್ಲಿ ತೆರಿಗೆ ಪಾವತಿಸಲು ಅವಕಾಶವನ್ನು ಮಾಡಿಕೊಡಲಾಗುತ್ತದೆ. ತೆರಿಗೆಯನ್ನು ಪಾವತಿಸದೆ ಇರುವ ತೆರಿಗೆದಾರರು ತಮ್ಮ ಜಾಗ/ಕಟ್ಟಡಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳ ಪ್ರತಿಯೊಂದಿಗೆ ಕೇಂದ್ರಕ್ಕೆ ಹಾಜರಾಗಿ ಬಾಕಿ ಇರುವ ತೆರಿಗೆಯನ್ನು ಪಾವತಿಸಲು ಈ ಅವಕಾಶವನ್ನು ಪಡೆದುಕೊಳ್ಳಬೇಕು. ಆ ಸಮಯದಲ್ಲಿ ಸಂಬಂಧಪಟ್ಟ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ತೆರಿಗೆ ವಸೂಲಿಗಾರರು ಹಾಜರಿದ್ದು ಸೂಕ್ತ ಮಾಹಿತಿಯನ್ನು ನೀಡಲಿದ್ದಾರೆ. ತೆರಿಗೆ ಪಾವತಿಗಾಗಿ ರಾಷ್ಟ್ರೀಕೃತ ಬ್ಯಾಂಕಿನಿಂದ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ. ಬಾಕಿ ತೆರಿಗೆ ಪಾವತಿಸದೇ ಇರುವವರ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.