ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10   ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ಬೆಂಗಳೂರು ಇವರ ಸುತ್ತೋಲೆಯಲ್ಲಿ 2019-20ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಬ್ಯಾಡ್ಮಿಂಟನ್ ಪಂದ್ಯಾವಳಿ ಡಿಸೆಂಬರ್ 27 ರಿಂದ ಜನವರಿ 2 ರವರೆಗೆ ಸಚಿವಾಲಯ ಜಿಮ್ಕಾನ್, ಸೆಕ್ಟರ್-21, ಗಾಂಧಿನಗರ, ಗುಜರಾತ್ ಇಲ್ಲಿ ನಡೆಯಲಿದೆ.

ಈ ಸಂಬಂಧ ರಾಜ್ಯ ತಂಡವನ್ನು ಡಿಸೆಂಬರ್ 15 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಮಟ್ಟದಿಂದ ನಾಗರಿಕ ಸೇವಾ ಬ್ಯಾಡ್ಮಿಂಟನ್ ಸ್ಪರ್ಧಾಳುಗಳನ್ನು ಆಯ್ಕೆ ಮಾಡಿ ಕಳುಹಿಸಿ ಕೊಡಬೇಕಾಗಿರುವುದರಿಂದ ಇದಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಪುರುಷ ಮತ್ತು ಮಹಿಳೆಯರಿಗೆ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನಡೆಸಿ ಆಯ್ಕೆಯಾದ ನೌಕರರನ್ನು ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆಗೆ ಕಳುಹಿಸಿಕೊಡಲಾಗುತ್ತದೆ. ಆಸಕ್ತಿ ಇರುವ ದ.ಕ ಜಿಲ್ಲೆಯ ಪುರುಷ ಮತ್ತು ಮಹಿಳಾ ರಾಜ್ಯ ಸರಕಾರಿ ನೌಕರರು (ಖಾಯಂ) ಡಿಸೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯು. ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣ, ಮಂಗಳೂರು ಇಲ್ಲಿ ನಡೆಯುವ ದ. ಕ. ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವ ದ. ಕ. ಜಿಲ್ಲೆಯ ನಾಗರಿಕ ಸೇವಾ ಕ್ರೀಡಾಪಟುಗಳು ಸರಕಾರಿ ಇಲಾಖೆಯಲ್ಲಿ ಖಾಯಂ ನೌಕರರಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ತಮ್ಮ ಇಲಾಖಾ ಮುಖ್ಯಸ್ಥರಿಂದ ದೃಢೀಕರಿಸಿದ ಗುರುತಿನ ಚೀಟಿಯನ್ನು ತರಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

error: Content is protected !!
Scroll to Top