ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.11. ಅಪ್ರಾಪ್ತೆ ವಿದ್ಯಾರ್ಥಿನಿಯೋರ್ವಳ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ದೇವಿನಗರ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಹಸೈನಾರ್ (25) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಪುಸಲಾಯಿಸಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡವು ಆರೋಪಿ ಹಸೈನಾರ್ ಈ ಹಿಂದೆಯೂ ಹಲವಾರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಪೊಲೀಸ್ ಇಲಾಖೆ ಹಾಗೂ ನ್ಯಾಯಾಲಯವು ಆರೋಪಿಗೆ ಕಠಿಣ ಶಿಕ್ಷೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಆರೋಪಿಗೆ ಕಠಿಣ ಶಿಕ್ಷೆ ನೀಡುವಲ್ಲಿ ವಿಫಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ ► ದಂಪತಿಗಳ ಜಗಳದಿಂದ ಮಗುವೊಂದು ಅನಾಥ

error: Content is protected !!
Scroll to Top