ಹೊಸದಿಲ್ಲಿ, ಡಿ.11: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.
ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ