ಕಾರ್ಕಳ: ತಂದೆಯಿಂದಲೇ ಮಗನ ಹತ್ಯೆ

ಕಾರ್ಕಳ, ಡಿ.11: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನ ಮಧ್ಯೆ ಜಗಳ ನಡೆದು ತಂದೆ, ಮಗನನ್ನು ಕೊಲೆ ಮಾಡಿದ ಘಟನೆ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದವರನ್ನು  ತಾಲೂಕಿನ ಕಸಬಾ ವ್ಯಾಪ್ತಿಯ ಮಂಗಳಪಾದೆ ನಿವಾಸಿ ವಿವಿಯನ್ ಡಿಸೋಜಾ(24) ಎಂದು ಗುರುತಿಸಲಾಗಿದೆ. ಈತನ ತಂದೆ ವಿಕ್ಟರ್ ಡಿಸೋಜಾ ಹತ್ಯೆಗೈದ ಆರೋಪಿಯಾಗಿದ್ದಾನೆ.

ಕುಡಿದ ಮತ್ತಿನಲ್ಲಿ ಈ ದುರ್ಘಟನೆ ನಡೆದಿದೆ. ವಿಕ್ಟರ್ ಡಿಸೋಜಾ ತನ್ನ ಮಗನನ್ನು ಚೂರಿಯಿಂದ ಇರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ವಿವಿಯನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Also Read  ಚಿತ್ರಕಲಾ ಗ್ರೇಡ್ ಪರೀಕ್ಷೆ- ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢ ಶಾಲೆಗೆ ಶೇಕಡಾ 100 ಫಲಿತಾಂಶ; ಅಂಜನಾ ಜೇಮ್ಸ್ ಪ್ರಥಮ, ಲವ್ಯಶ್ರೀ ದ್ವಿತೀಯ

ಬಳಿಕ ವಿವಿಯನ್ ನ ಸಹೋದರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ

 

error: Content is protected !!
Scroll to Top