ಬೆಂಗಳೂರು, ಡಿ.11: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Also Read  ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ