ಗುಜರಾತ್, ಡಿ.11: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್’ಚಿಟ್ ನೀಡಿದೆ.
ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ.
ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು ಎಂದು ನಾನಾವತಿ ಆಯೋಗ ತಿಳಿಸಿದ್ದು, ಈ ಮೂಲಕ ಪ್ರಕರಣ ಸಂಬಂಧ ಮೋದಿ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.
ರಲಭೆ ಪ್ರಕರಣ ಕುರಿತು 2002ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ತನಿಖೆಗೆ ಆಯೋಗವನ್ನು ರಚನೆ ಮಾಡಿತ್ತು