ಅಸ್ಸಾಂ, ಡಿ.12: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವ ರಾಮೇಶ್ವರ್ ತೇಲಿ  ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಅಸ್ಸಾಂ ದಿಬ್ರುಗಢ್ ನ ದುಲಿಯಾಜನ್ ಪ್ರದೇಶದಲ್ಲಿರುವ ಸಂಸದ ಮತ್ತು ಕೇಂದ್ರ ಆಹಾರ ಸಂಸ್ಕರಣಾ ರಾಜ್ಯ ಸಚಿವರಾದ ರಾಮೇಶ್ವರ್ ತೇಲಿ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ಮಾಡಿದ್ದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಮನೆ ಅವರಣದಲ್ಲಿ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಅದೃಷ್ಟವಶಾತ್ ಈ ವೇಳೆ ಮನೆಯಲ್ಲಿದ್ದ ಯಾರಿಗೂ ಯಾವುದೇ ರೀತಿಯ ಅಪಾಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

Also Read  ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್