(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13 ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ಹಾಗೂ ಚಿಕುಂಗುನ್ಯ ನಿಯಂತ್ರಣದ ಬಗ್ಗೆ ಅತೀ ಅವಶ್ಯಕ ಕ್ರಮಗಳಾದ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ಗುರುತಿಸುವಿಕೆ , ನಾಶಪಡಿಸುವಿಕೆ ಮತ್ತು ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ಶಿಕ್ಷಣ ನೀಡುವ ಬಗ್ಗೆ ಕರ್ನಾಟಕ ರಾಜ್ಯಾದ್ಯಂತ ‘ನಾಗರಿಕರಿಗೊಂದು ಸವಾಲು’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಧೂಮಾವತಿ ಪ್ರೆಂಡ್ಸ್ ಕ್ಲಬ್ ಹೊಯಿಗೆ ಬಜಾರ್ ಇವರ ಆಶ್ರಯದಲ್ಲಿ “ನಾಗರಿಕರಿಗೊಂದು ಸವಾಲು’’ ಎಂಬ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಡಿಸೆಂಬರ್ 7 ರಂದು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಹೊಯಿಗೆ ಬಜಾರ್ ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ , ಎಂ ಆರ್ ಉದ್ಭಾಟಿಸಿ, ಜಿಲ್ಲೆಯಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದ್ದು ಸಾರ್ವಜನಿಕರು ನಿಯಂತ್ರಣ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತೆ ಗಾಯತ್ರಿ ನಾಯಕ್ , ಡೆಂಗ್ಯೂ , ಮಲೇರಿಯಾ , ಚಿಕುಂಗುನ್ಯ ನಿಯಂತ್ರಣ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಭಾಗಿತ್ವದ ಬಗ್ಗೆ ಮಾತನಾಡಿದರು.
ಡೆಂಗ್ಯೂ ಹಾಗೂ ಚಿಕುಂಗುನ್ಯ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಮಾಹಿತಿ ಶಿಕ್ಷಣ ನೀಡಲಾಯಿತು. ವೇದಿಕೆಯಲ್ಲಿ ಮಹಾನಗರಪಾಲಿಕೆ ಸದಸ್ಯೆ ರೇವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ , ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್ , ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ರಾಜೇಶ್ , ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ ಭಂಡಾರಿ , ಜೆಪ್ಪು ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ .ವಿದ್ಯಾ , ಜಿಲ್ಲಾ ಪರಿಸರಾಸಕ್ತರ ಒಕ್ಕೂಟದ ಸುರೇಶ್ ಶೆಟ್ಟಿ , ಹಾಗೂ ಧೂಮಾವತಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಜಿಲ್ಲಾ ಕೀಟಶಾಸ್ತ್ರಜ್ಞರು , ವಲಯ ಕೀಟ ಶಾಸ್ತ್ರಜ್ಞರು , ಹಿರಿಯ / ಕಿರಿಯ ಆರೋಗ್ಯ ಸಹಾಯಕರು ಮತ್ತು ಮಹಾನಗರಪಾಲಿಕೆಯ ಮೇಲ್ವಿಚಾರಕರು ಎಂಪಿಡಬ್ಲ್ಯೂ ಗಳು , ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂಧಿಗಳು ಮತ್ತು ಸ್ಥಳೀಯ ಧೂಮಾವತಿ ಪ್ರೆಂಡ್ಸ್‍ಕ್ಲಬ್ ನ ಸದಸ್ಯರು ಭಾಗವಹಿಸಿದ್ದರು.