ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞೆ ತಪ್ಪಿದ ಯುವತಿ ➤ ಮುಂದೇನಾಯ್ತು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿಯೊರ್ವಳು ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕುಳಾಯಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಯುವಕನೋರ್ವ ಕಾರನ್ನು ಚಲಾಯಿಸುತ್ತಿದ್ದು, ಕಾರಿನಲ್ಲಿ ಯುವತಿಯೊರ್ವಳು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದನ್ನು ಬೇರೆ ವಾಹನದಲ್ಲಿ ತೆರಳುತ್ತಿರುವವರು ಗಮನಿಸಿದ್ದಾರೆ. ಅನುಮಾನಗೊಂಡು ವಾಹನ ಸವಾರರು ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ, ಕಾರನ್ನು ಚಲಾಯಿಸುತ್ತಿದ್ದ ಯುವಕ ಕಾರು ನಿಲ್ಲಿಸದೆ ಮುಂದಕ್ಕೆ ಹೋಗಿದ್ದಾನೆ. ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದು ಪ್ರಶ್ನಿಸಿದಾಗ ಯುವಕ ಪರಾರಿಯಾಗಿದ್ದಾನೆ. ಸ್ಥಳೀಯರು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಕೊಣಾಜೆ: ಖಾಸಗಿ ಬಸ್ - ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top